ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಇದೇ ಮೊದಲ ಬಾರಿಗೆ ಫಲಿತಾಂಶದ ದಿನದಂದು ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಈ ವರ್ಷ ಮಾತ್ರ ಮುದ್ರಿತ ಅಂಕಪಟ್ಟಿ ನೀಡಲಾಗುವುದು. ಮುಂದಿನ ಶೈಕ್ಷಣಿಕ ಸಾಲಿನಿಂದ ಸಂಪೂರ್ಣ ಡಿಜಿಟಲ್ ಅಂಕಪಟ್ಟಿಯನ್ನು ಮಾತ್ರ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

