ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಪದವಿ ಪೂರ್ವ ಪಠ್ಯಕ್ರಮ ಬೋಧಿಸುವ ಆಯಾ ವಿಷಯಗಳ ಉಪನ್ಯಾಸಕರಿಂದ ಸಿದ್ಧಪಡಿಸಲಾದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಳಸಿಕೊಂಡು 2024 -25ನೇ ಸಾಲಿನ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಫಲಿತಾಂಶವನ್ನು ಉತ್ತಮಪಡಿಸಲು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಮಂಜುಶ್ರೀ ಸೂಚನೆ ನೀಡಿದ್ದಾರೆ.

ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ನೀಡಿರುವ ಸೂಚನೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಬೇಕು. ಆಯಾ ವಿಷಯಗಳ ಲಿಖಿತ ಪರೀಕ್ಷೆಗೆ ನಿಗದಿಪಡಿಸಿದ್ದ ಒಟ್ಟು ಅಂಕಗಳು ಪರೀಕ್ಷಾ ಅವಧಿ ಮೊದಲಾದ ವಿಷಯಗಳನ್ನು ಮನವರಿಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಕುರಿತಂತೆ ಹೆಚ್ಚಿನ ಮಾಹಿತಿಗೆ http://kseab.Karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read