HomeLatest Newsಪಿಯು ಬೋರ್ಡ್ ಎಡವಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು: ಪರೀಕ್ಷಾ ಕೇಂದ್ರ...

ಪಿಯು ಬೋರ್ಡ್ ಎಡವಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು: ಪರೀಕ್ಷಾ ಕೇಂದ್ರ ಹುಡುಕಲು ಅಲೆದಾಟ

ಯಾದಗಿರಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಪರೀಕ್ಷೆ ಮೊದಲ ದಿನವೇ ಪಿಯು ಬೋರ್ಡ್ ಹಾಗೂ ಕಾಲೇಜಿನ ಎಡವಟ್ಟಿನಿಂದಾಗಿ ಯಾದಗಿರಿಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿ ಪೇಚಾಡಿದ ಘಟನೆ ನಡೆದಿದೆ.

ಹಾಲ್ ಟಿಕೆಟ್‌ನಲ್ಲಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗಿ ನಮೂದಾಗಿದ್ದರಿಂದ ಬೇರೆ ಬೇರೆ ಊರುಗಳಿಂದ ಬಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಹುಡುಕಲು ಗಂಟೆಗಟ್ಟಲೆ ಅಲೆದಾಡಿರುವ ಪ್ರಸಂಗ ನಡೆದಿದೆ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದ್ಯಂತ 1,217 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿ ಮಾಡಿರುವ ಯಡವಟ್ಟಿಗೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಯಾದಗಿರಿಯಲ್ಲಿ ಗೊಂದಲಕ್ಕೀಡಾಗಿರುವ ಘಟನೆ ನಡೆದಿದೆ.

ಹಾಲ್ ಟಿಕೆಟ್ ನಲ್ಲಿ ಪರೀಕ್ಷಾ ಕೇಂದ್ರವನ್ನು ತಪ್ಪಾಗಿ ನಮೂಡಿಸಲಾಗಿದೆ. ಪರೀಕ್ಷಾ ಕೇಂದ್ರ ಇರೋದೆ ಒಂದು ಕಡೆಯಾದರೆ ಹಾಲ್‌ ಟಿಕೆಟ್‌ನಲ್ಲಿ ನಮೂದಿಸಿರುವ ವಿಳಾಸವೇ ಬೇರೆ. ಇದರಿಂದಾಗಿ ದ್ವೀತಿಯ ಪಿಯು ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಯಾದಗಿರಿಯಲ್ಲಿ ಪರದಾಡಿದ್ದಾರೆ. ಯಾದಗಿರಿ ನಗರ ಸಬಾ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದ ವಿಚಾರವಾಗಿ ಗೊಂದಲ ಉಂಟಾಗಿದ್ದು, ಬೇರೆ ಬೇರೆ ಊರುಗಳಿಂದ‌ ಬಂದ ವಿದ್ಯಾರ್ಥಿಗಳು ಕೆಲ ಕಾಲ ಆತಂಕ್ಕೆ ಒಳಗಾದರು. ಕಾಲೇಜು ಇರೋದು ಲುಂಬಿನಿ ಪಾರ್ಕ್ ಬಳಿ. ಹಾಲ್ ಟಿಕೆಟ್​​ನಲ್ಲಿ ಗಂಜ್ ರೋಡ್ ಎಂದು ನಮೂದಿಸಲಾಗಿದೆ. ಹೀಗಾಗಿ ಗಂಟೆಗಳ ಕಾಲ ಪರೀಕ್ಷಾ ಕೇಂದ್ರಕ್ಕಾಗಿ ವಿದ್ಯಾರ್ಥಿಗಳು ಹುಡುಕಾಡಿದ್ದಾರೆ. ಅಂತಿಮವಾಗಿ ಸ್ಥಳೀಯರ ಸಹಾಯದಿಂದ ಸಬಾ ಪಿಯು ಕಾಲೇಜು ತಲುಪಿದ್ದಾರೆ.

ಇಂದಿನಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿ ಸಲಾಗಿದೆ. ಪರೀಕ್ಷೆ ವೇಳೆ ಎಲೆಕ್ಟ್ರಾನಿಕ್ ಸಾಮಗ್ರಿ ವಸ್ತುಗಳ ಬಳಕೆ, ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಸ್ಫೋಟಕ ವಸ್ತು ತೆಗೆದುಕೊಂಡು ಹೋಗುವಂತಿಲ್ಲ. ಜೊತಗೆ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆ ಕಡ್ಡಾಯ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular