ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿಯಾಅಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ನರಗುಂದ ಮೂಲದವರು ಎನ್ನಲಾಗಿದ್ದು, ಕೊಪ್ಪಳಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

