ಭದ್ರಾ ನಾಲೆ ಅಕ್ರಮ ಪಂಪ್ಸೆಟ್ ತೆರವು: ನಿಷೇಧಾಜ್ಞೆ ಜಾರಿ

ದಾವಣಗೆರೆ: ಭದ್ರಾ ನಾಲೆಯಲ್ಲಿ ಅಕ್ರಮವಾಗಿ ಅಳವಡಿಸಲಾದ ಪಂಪ್ಸೆಟ್ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಚನ್ನಗಿರಿ ತಾಲೂಕಿನ ಭದ್ರಾ ನಾಲೆ ಸುತ್ತಮುತ್ತ ಫೆಬ್ರವರಿ 28 ರವರೆಗೆ 100 ಅಡಿ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೇಸಿಗೆ ಹಂಗಾಮಿಗೆ ಅಚ್ಚುಕಟ್ಟು ಪ್ರದೇಶಕ್ಕೆ ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿಸಲಾಗಿದ್ದು, ಕಾಲುವೆಯ ಮೇಲ್ಭಾಗದಲ್ಲಿ ಅಕ್ರಮವಾಗಿ ಪಂಪ್ಸೆಟ್ ಅಳವಡಿಸಿಕೊಂಡು ತೋಟಗಳಿಗೆ ನೀರು ಹಾಯಿಸಿಕೊಳ್ಳಲಾಗುತ್ತಿದೆ. ಇದರಿಂದ ಅಚ್ಚುಕಟ್ಟು ಕೊನೆ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಹೀಗಾಗಿ ರೈತರು ಹೋರಾಟ ನಡೆಸಿದ್ದು, ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ. ಅವರು ಸಭೆ ನಡೆಸಿ ಕಾಲುವೆಗೆ ಅಳವಡಿಸಿದ ಅಕ್ರಮ ಪಂಪ್ ಸೆಟ್ ತೆರವುಗೊಳಿಸಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಅಕ್ರಮ ಪಂಪ್ ಸೆಟ್ ಗಳ ವಿದ್ಯುತ್ ಕಡಿತ, ಸ್ವಾಧೀನ ಭೂಮಿಯಲ್ಲಿ ಅಳವಡಿಸಿದ್ದ ಟಿಸಿ ತೆರವುಗೊಳಿಸಲು ಸೂಚಿಸಲಾಗಿದೆ. ಅಧಿಕಾರಿಗಳ ತಂಡ ಭದ್ರನಾಲೆಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಪಂಪ್ಸೆಟ್ ತೆರವುಗೊಳಿಸುತ್ತಿದ್ದು, ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read