HomeIndiaಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪುಣೆ: ಐಷಾರಾಮಿ ಪೋಶೆ ಕಾರ್ ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ಮಾದರಿ ಬದಲಿಸಿ ಅದರ ಜಾಗದಲ್ಲಿ ಮಹಿಳೆಯೊಬ್ಬರ ರಕ್ತದ ಮಾದರಿ ಇರಿಸಲಾಗಿತ್ತು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ರೀತಿ ರಕ್ತದ ಮಾದರಿಯನ್ನು ಬದಲಾಯಿಸಿ ಬಾಲಕ ಕಾರ್ ಚಾಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಮದ್ಯಪಾನ ಮಾಡಿರಲಿಲ್ಲ ಎಂದು ತೋರಿಸಲು ಪ್ರಯತ್ನಿಸಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಂಧಿಸಿದ ಸಸ್ತೂನ್ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಒಬ್ಬ ನೌಕರನ ಪೊಲೀಸ್ ಕಸ್ಟಡಿ ಅವಧಿಯನ್ನು ಸೆಷನ್ಸ್ ನ್ಯಾಯಾಲಯ ಜೂನ್ 5 ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಅಪಘಾತ ಎಸಗಿದ ಬಾಲಕನ ರಕ್ತದ ಮಾದರಿಯ ಬದಲಿಗೆ ಇರಿಸಿದ್ದ ರಕ್ತದ ಮಾದರಿ ಯಾವ ಮಹಿಳೆಯದ್ದು ಎಂಬುದನ್ನು ಗುರುತಿಸಬೇಕಿದೆ ಎಂದು ನ್ಯಾಯಾಲಯಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ. ಆ ರಕ್ತದ ಮಾದರಿ ಬಾಲಕನ ತಾಯಿಗೆ ಸೇರಿದ್ದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular