HomeIndiaಮಾಜಿ ಕೌನ್ಸಿಲರ್ ನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಮಾಜಿ ಕೌನ್ಸಿಲರ್ ನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪುಣೆ: ಎನ್ ಸಿಪಿ ಯ ಮಾಜಿ ಕೌನ್ಸಿಲರ್ ಓರ್ವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಮುನ್ಸಿಪಲ್ ಕಾರ್ಪೊರೇಶನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ಕೊಲೆಯಾದವರು. ಪುಣೆಯ ನಾನಾಪೇಠ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪು ವನರಾಜ್ ಮೇಲೆ ಗುಂಡಿನ ದಾಳಿ ನಡೆಸಿದೆ. ಅಲ್ಲದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿ ಹತ್ಯೆಗೈದಿದೆ.

ವನರಾಜ್ ಇಮಾಂದಾರ್ ಚೌಕ್ ನಲ್ಲಿ ನಿಂತುಕೊಂಡಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular