HomeIndiaNCP ನಾಯಕ ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

NCP ನಾಯಕ ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

ಮುಂಬೈ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿ 34 ವರ್ಷದ ಸಾಗರ್ ಬಾರ್ವಿಯನ್ನು ಬಂಧಿಸಲಾಗಿದೆ.

ಮುಂಬೈ ಪೊಲೀಸರು ಪುಣಿಯಲ್ಲಿ ಸಾಗರ ಬಾರ್ವಿಯನ್ನು ಬಂಧಿಸಿದ್ದಾರೆ. ಶರದ್ ಪವಾರ್ ಅವರಿಗೆ ಸಾಗರ್ ಜೀವ ಬೆದರಿಕೆ ಸಂದೇಶ ಕಳುಹಿಸಿದ್ದ. ವಾಟ್ಸಾಪ್ ಮೂಲಕ ಆರೋಪಿ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಸಂಬಂಧ ಮುಂಬೈ ಪೊಲೀಸರಿಗೆ ಸುಪ್ರಿಯಾ ಸುಳೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖೆ ನಡೆಸಿದ ಪೊಲೀಸರು ಪುಣೆಯಲ್ಲಿ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಸಂದೇಶ ಕಳಿಸಿದ್ದ ಸಾಗರ್ ನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular