ವೇಗವಾಗಿ ಕಾರ್ ಚಲಾಯಿಸಿ ಇಬ್ಬರು ಸವಾರರ ಕೊಂದ ಅಪ್ರಾಪ್ತ

ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಮೋಟಾರ್‌ ಸೈಕಲ್‌ ಗೆ ಪೋರ್ಷೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಐಷಾರಾಮಿ ಕಾರ್ ಅನ್ನು ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದದ್ದು ಭೀಕರ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣಿ ನಗರದಲ್ಲಿ ಮುಂಜಾನೆ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. 17 ವರ್ಷದ ಕಾರ್ ಚಾಲಕನ ವಿರುದ್ಧ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಲಿಯಾದವರನ್ನು ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂದು ಗುರುತಿಸಲಾಗಿದೆ. ಅವರು ಕಲ್ಯಾಣಿನಗರದ ರೆಸ್ಟೊರೆಂಟ್‌ನಲ್ಲಿ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಕಲ್ಯಾಣಿನಗರ ಜಂಕ್ಷನ್‌ಗೆ ತಲುಪಿದಾಗ ವೇಗವಾಗಿ ಬಂದ ಪೋರ್ಷೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ವಾಹನದಿಂದ ಕೆಳಗೆ ಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪಘಾತಕ್ಕೀಡಾದ ಕಾರ್ ನಿಂದ ಹೊರಬರಲು ಪ್ರಯತ್ನಿಸಿದಾಗ ಜನರ ಗುಂಪು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಾರ್ ಚಾಲಕನ ವಿರುದ್ಧ ಯರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read