ಹೆಣ್ಣುಮಗುವೆಂದು ತಿಳಿದು ಮನೆಯಲ್ಲೇ ಗರ್ಭಪಾತ; ಕುಟುಂಬದವರ ನೀಚ ಕೃತ್ಯಕ್ಕೆ ಮೃತಪಟ್ಟ ಮಹಿಳೆ

ಗರ್ಭ ದಲ್ಲಿರುವುದು ಹೆಣ್ಣು ಮಗುವೆಂದು ತಿಳಿದ ಬಳಿಕ ಮನೆಯಲ್ಲೇ ರಹಸ್ಯವಾಗಿ ಗರ್ಭಪಾತ ಮಾಡಿದ ಪರಿಣಾಮ 24 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಘಟನೆಯ ನಂತರ ಪೊಲೀಸರು ಮಹಿಳೆಯ ಪತಿ ಮತ್ತು ಮಾವನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅತ್ತೆ ಮೇಲೂ ಪ್ರಕರಣ ದಾಖಲಾಗಿದೆ.

ನಾಲ್ಕು ತಿಂಗಳ ಭ್ರೂಣವನ್ನು ಜಮೀನಿನಲ್ಲಿ ಹೂತಿಟ್ಟಿದ್ದು ತನಿಖೆಯಿಂದ ಬೆಳಕಿಗೆ ಬಂದಿದೆ. ಗರ್ಭಪಾತ ಮಾಡಲು ಕರೆಸಿಕೊಂಡಿದ್ದ ಖಾಸಗಿ ವೈದ್ಯರನ್ನೂ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆ 2017 ರಲ್ಲಿ ಆರೋಪಿಯನ್ನು ಮದುವೆಯಾಗಿದ್ದರು. ಈಗಾಗಲೇ ಆಕೆಗೆ ಒಂದು ಗಂಡು, ಒಂದು ಹೆಣ್ಣು ಮಗುವಿದ್ದು ಮೂರನೇ ಬಾರಿಗೆ ಗರ್ಭ ಧರಿಸಿದ್ದರು. ಭ್ರೂಣವು ಹೆಣ್ಣು ಎಂದು ಗೊತ್ತಾಗುತ್ತಿದ್ದಂತೆ ಮನೆಯಲ್ಲಿಯೇ ಗರ್ಭಪಾತಕ್ಕೆ ವ್ಯವಸ್ಥೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮಹಿಳೆಯ ಸ್ಥಿತಿ ತೀವ್ರ ರಕ್ತಸ್ರಾವದಿಂದ ಹದಗೆಟ್ಟಿದ ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದರು ಎಂದು ಇಂದಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಮಹಿಳೆಯ ಸಹೋದರನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದಾದ ಬಳಿಕ ಆಕೆಯ ಪತಿ ಹಾಗೂ ಮಾವನನ್ನು ಬಂಧಿಸಲಾಯಿತು. ಜಮೀನಿನಿಂದ ಭ್ರೂಣವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರು ಇಂದಾಪುರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 91, 90 ಮತ್ತು 85 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read