ಕೋಚಿಂಗ್ ಸೆಂಟರ್ ನ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಪುಣೆ: ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ ವಿದ್ಯಾರ್ಥಿಗಳ ಆರೋಗ್ಯ ಸುಧಾರಿಸಿದೆ.

ಪುಣೆಯ ಖೇಡ್ ತಾಲೂಕಿನ ಕೋಚಿಂಗ್ ಸೆಂಟರ್ ನಲ್ಲಿ ಜೆಇಇ, ನೀಟ್ ಪರೀಕ್ಷಾರ್ತಿಗಳಿಗಾಗಿ ಕೋಚಿಂಗ್ ನೀಡಲಾಗುತ್ತಿತ್ತು. 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ. ಕಳೆದ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬಳಿಕ ವಾಂತಿ-ಭೇದಿ, ಅತಿಸಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read