HomeLatest NewsBIG NEWS: ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ: FIR ದಾಖಲು

BIG NEWS: ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ: FIR ದಾಖಲು

ಮೈಸೂರು: ಇದ್ರಿದ್ ಪಾಷಾ ಸಾವಿನ ಪ್ರತಿಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ವಾಟ್ಸಪ್ ಮೂಲಕ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

Next You ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಪುನೀತ್ ಕೆರೆಹಳ್ಳಿ ಕೊಲೆ ಬೆದರಿಕೆ ಹಾಕಲಾಗಿದೆ. ಗೋವು ಸಾಕಾಣಿಕೆ ವೇಳೆ ಇದ್ರಿದ್ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಪ್ರಕರಣದ ಬಗ್ಗೆ ಪುನೀತ್ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದು, ಇದೀಗ ಕೊಲೆ ಬೆದರಿಕೆ ಹಾಕಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular