HomeEntertainmentಅಪ್ಪು ಅಗಲಿಕೆಗೆ 3 ವರ್ಷ: ಮಗಳೊಂದಿಗೆ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್;...

ಅಪ್ಪು ಅಗಲಿಕೆಗೆ 3 ವರ್ಷ: ಮಗಳೊಂದಿಗೆ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್; ಕುಟುಂಬಸ್ಥರು ಸಾಥ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ವರ್ಷಗಳು ಕಳಿದಿವೆ. ಪುನೀತ್ ರಾಜ್ ಕುಮಾರ್ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿಗೆ ಪತ್ನಿ ಅಶ್ವಿನಿ, ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಗಳ ಜೊತೆ ಸೇರಿ ಪತಿಯ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಸೇರಿದಂತೆ ಕುಟುಂಬದವರು ಉಪಸ್ಥಿತರಿದ್ದರು.

ಅಪ್ಪುಗೆ ಇಷ್ಟವಾಗುವ ತಿಂಡಿ, ಸಿಹಿ ಖಾದ್ಯಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆ, ಹಳ್ಳಿ ಹಳ್ಳಿಗಳಿಂದ ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಅಪ್ಪು ಅಭಿಮಾನಿಗಳು, ಅಪ್ಪು ಸಮಾದಿ ಬಳಿ ಆಗಮಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಭಿಮಾನಿಗಳಿಗೆ ಅನ್ನದಾನ ಮಾಡಲಾಗುತ್ತಿದೆ. ಇನ್ನು ರಾಜ್ಯಾದ್ಯಂತ ಇಂದು ಅನ್ನದಾನ, ರಕ್ತದಾನ ಶಿಬಿರಗಳು ನಡೆಯುತ್ತಿವೆ.

For Latest News Updates, Join Our Whatsapp Community🚩
RELATED ARTICLES

Most Popular