HomeEntertainment‘ಸ್ಪೂರ್ತಿ ದಿನ’ವಾಗಿ ಪುನೀತ್ ರಾಜಕುಮಾರ್ ಜನ್ಮದಿನ ಆಚರಣೆ

‘ಸ್ಪೂರ್ತಿ ದಿನ’ವಾಗಿ ಪುನೀತ್ ರಾಜಕುಮಾರ್ ಜನ್ಮದಿನ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಜನ್ಮದಿನವನ್ನು ಅಭಿಮಾನಿಗಳು ಸ್ಪೂರ್ತಿ ದಿನವಾಗಿ ಆಚರಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಪುನೀತ್ ಬರ್ತಡೇ ಹಿನ್ನೆಲೆಯಲ್ಲಿ ‘ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ’ ಎನ್ನುವ ಪುನೀತ್ ಮಾತನ್ನು ಘೋಷವಾಕ್ಯ ಹೊಂದಿರುವ ಸಿಡಿಪಿ ಬಿಡುಗಡೆ ಮಾಡಲಾಗಿದೆ.

ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕಕ್ಕೆ ಅಭಿಮಾನಿಗಳು ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಪುನೀತ್ ಸ್ಮಾರಕದಿಂದ ಪ್ರಸನ್ನ ಚಿತ್ರಮಂದಿರದವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ರಕ್ತದಾನ ಶಿಬಿರ, ನೇತ್ರದಾನ ಜಾಗೃತಿ, ಅನ್ನ ಸಂತರ್ಪಣೆ ಕೈಗೊಳ್ಳಲಾಗಿದೆ. ಮೈಸೂರಿನ ಅಗ್ರಹಾರದಲ್ಲಿ ಪುನೀತ್ ರಾಜಕುಮಾರ್ ಅವರ 49 ಅಡಿ ಎತ್ತರ ಕಟೌಟ್ ನಿರ್ಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದೆಡೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಜಾಕಿ’ ಸಿನಿಮಾ ಮರು ಬಿಡುಗಡೆಯಾಗಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 14 ವರ್ಷಗಳ ನಂತರ ಬಿಡುಗಡೆಯಾದ ‘ಜಾಕಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಇನ್ನು ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರತಿ ವರ್ಷವೂ ಅವರ ಸಿನಿಮಾ ಮರು ಬಿಡುಗಡೆ ಮಾಡುವುದಾಗಿ ಕೆ.ಆರ್.ಜಿ. ಸ್ಟುಡಿಯೋಸ್ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular