ಶೇ. 10 ರಷ್ಟು ವ್ಯಾಟ್ ಹೆಚ್ಚಳ ಮಾಡುವುದರೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ ಪಂಜಾಬ್ ಸರ್ಕಾರ

ನವದೆಹಲಿ: ಪಂಜಾಬ್ ಸರ್ಕಾರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು(ವ್ಯಾಟ್) ಭಾನುವಾರ 10% ಹೆಚ್ಚಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ ಲೀಟರ್‌ಗೆ 92 ಪೈಸೆ ಮತ್ತು ಲೀಟರ್‌ಗೆ 88 ಪೈಸೆ ಏರಿಕೆಯಾಗಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ವ್ಯಾಟ್ ಹೆಚ್ಚಳವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ ಒಂದು ರೂಪಾಯಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಮೊಹಾಲಿಯಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ 98.95 ರೂ. ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 89.25 ರೂ. ಆಗಲಿದೆ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.20 ರೂ. ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 84.26 ರೂ. ಆಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read