ಭಾರತ-ಪಾಕಿಸ್ತಾನ ನದುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪಂಜಾಬ್ ನ ಗುರುದಾಸ್ ಪುರ ಜಿಲ್ಲೆಯಲ್ಲಿ ಸಂಪೂರ್ಣ ಬ್ಲ್ಯಾಕ್ ಔಟ್ ಜಾರಿ ಮಾಡಲಾಗಿದೆ. ಇಡೀ ಜಿಲ್ಲೆಯಾದ್ಯಂತ ವಿದ್ಯುತ್ ಕಡಿತಗೊಳಿಸಲಾಗಿದೆ.
ರಾತ್ರಿ 9ಗಂಟೆಯಿಂದ ಮುಂಜಾನೆ 5ಗಂಟೆಯವರೆಗೂ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ರಕ್ಷಣಾ ಕಾಯ್ದೆಯಡಿಯಲ್ಲಿ ಗುರುದಾಸ್ ಪುರ ಜಿಲ್ಲೆಯಾದ್ಯಂತ ವಿದ್ಯುತ್ ಸ್ಥಗಿತಗೊಂಡಿದೆ. ಮುಂದಿನ ಸೂಚನೆ ಬರುವರೆಗೂ ಈ ಆದೇಶ ಜಾರಿಯಲ್ಲಿರಲಿದೆ.
ಆಸ್ಪತ್ರೆಗಳು ಮತ್ತು ಸೆಂಟ್ರಲ್ ಜೈಲ್ ಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ನಾಗರಿಕರು ಮನೆಯ ಬಾಗಿಲು, ಕಿಟಕಿಗಳನ್ನು ತೆರೆಯದಂತೆ ಆದೇಶ ನೀಡಲಾಗಿದೆ. ರಾತ್ರಿ ವಿದ್ಯುತ್ ಕಡಿತ ಜಾರಿಗೊಳಿಸಿದ ಮೊದಲ ಗಡಿ ಜಿಲ್ಲೆ ಗುರುದಾಸ್ ಪುರವಾಗಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.