HomeIndiaBIG NEWS: ಪಂಜಾಬ್ ಹಾಗೂ ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

BIG NEWS: ಪಂಜಾಬ್ ಹಾಗೂ ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

ನವದೆಹಲಿ: ರಾಷ್ಟ್ರಾದ್ಯಂತ ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಪಂಜಾಬ್, ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಪಂಜಾಬ್ ಹಾಗೂ ಹರಿಯಾಣ ಸಚಿವಾಲಯಕ್ಕೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಕಾರ್ಯಪ್ರವೃತ್ತರಾಗಿದ್ದು, ಸಚಿವಾಲಯದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಚಿವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಚಂಡೀಗಢ, ಗುರುಗ್ರಾಮ ಹಾಗೂ ಹರುಯಾಣದ ಇತರೆಡೆಯೂ ಹಲವು ಶಾಲೆಗಳಿಗೆ ಬಾಂಬ್ ಬೆದರ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸಿ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಅದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular