ಆನ್ ಲೈನ್ ನಲ್ಲಿ ಮಹಿಳೆಯ ಮೊಬೈಲ್ ನಂಬರ್ ಸಹಿತ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಆಕ್ಷೇಪಾರ್ಹ ಫೋಟೋಗಳು ಮತ್ತು ಮೊಬೈಲ್ ಫೋನ್ ಸಂಖ್ಯೆಯನ್ನು ಅಪ್‌ ಲೋಡ್ ಮಾಡುವ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆರೋಪಿ ಅಮನ್ ದೀಪ್‌ ಕುಮಾರ್‌ ಪಂಜಾಬ್‌ ನ ಕಪುರ್ತಲಾ ಮೂಲದವ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಿರುದ್ಯೋಗಿಯಾಗಿರುವ ಆರೋಪಿ ಆನ್‌ ಲೈನ್‌ ನಲ್ಲಿ ಲೈಂಗಿಕ ವಿಷಯ ಸರ್ಫಿಂಗ್ ಮಾಡುವ ಅಭ್ಯಾಸ ಹೊಂದಿದ್ದು, ಮೋಜಿಗಾಗಿ ಈ ಕೃತ್ಯ ಮಾಡಿದ್ದಾನೆ.

ಯಾರೋ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ತನ್ನ ಆಕ್ಷೇಪಾರ್ಹ ಫೋಟೋಗಳು ಮತ್ತು ಮೊಬೈಲ್ ಸಂಖ್ಯೆ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ 24 ವರ್ಷದ ಶಹದಾರಾ ನಿವಾಸಿ ಪೊಲೀಸರಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನ ಐಪಿ ವಿಳಾಸಗಳನ್ನು ಸಂಗ್ರಹಿಸಿದ ತನಿಖಾ ತಂಡ ಇಂಟರ್‌ನೆಟ್ ಪ್ರೋಟೋಕಾಲ್ ಡೀಟೇಲ್ ರೆಕಾರ್ಡ್(ಐಪಿಡಿಆರ್) ನ ವಿವರವಾದ ವಿಶ್ಲೇಷಣೆಯನ್ನು ನಡೆಸಿದ್ದು, ಆರೋಪಿಯ ಮೊಬೈಲ್ ಸಂಖ್ಯೆಯ ವಿರುದ್ಧ ಆಪಾದಿತ ಐಪಿಡಿಆರ್ ವಿಳಾಸಗಳು ದಾಖಲಾಗಿವೆ ಎಂದು ಉಪ ಪೊಲೀಸ್ ಆಯುಕ್ತ(ಶಹದರಾ) ರೋಹಿತ್ ಮೀನಾ ತಿಳಿಸಿದ್ದಾರೆ. .

ಫೋನ್ ಸಂಖ್ಯೆಯು ಅಮನ್‌ ದೀಪ್ ಕುಮಾರ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಕಂಡುಬಂದಿದೆ. ತಾಂತ್ರಿಕ ಕಣ್ಗಾವಲು ಮತ್ತು ರಹಸ್ಯ ಮಾಹಿತಿಯ ಸಹಾಯದಿಂದ ಆರೋಪಿಯನ್ನು ಪಂಜಾಬ್‌ನ ಕಪುರ್ತಲಾದಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read