BIG NEWS: ಸಹಜ ಸ್ಥಿತಿಗೆ ಮರಳಿದ ಪಂಜಾಬ್ ನ ಪಠಾಣ್ ಕೋಟ್

ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಹಿನ್ನೆಲೆಯಲ್ಲಿ ಪಂಜಾಬ್, ಜಮ್ಮು-ಕಾಶ್ಮೀರ ಸೇರಿದಂತೆ ಹಲವೆಡೆ ಶಾಂತಿ ನೆಲೆಸುತ್ತಿದ್ದು, ಸಹಜ ಸ್ಥಿತಿಯತ್ತ ಜನಜೀವನ ಮರಳುತ್ತಿದೆ.

ವಿಶೇಷವಾಗಿ ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದ್ದು, ಸಾಮಾನ್ಯ ಚಟುವಟಿಕೆಗಳು ಆರಂಭವಾಗಿವೆ. ಹೊಸ ಘಟನೆಗಳಾಗಲಿ, ದಾಳಿಯಂತಹ ಯಾವುದೇ ಪ್ರಕರಣಗಳು ನಡೆದಿಲ್ಲ.

ಭಾರತ-ಪಾಕಿಸ್ತಾನ ನಡುವೆ ಅಘೋಷಿತ ಯುದ್ಧದ ವಾತಾವರಣದ ಬಳಿಕ ಜಮ್ಮು-ಕಾಶ್ಮೀರ, ಪಂಜಾಬ್ ನ ಪಠಾಣ್ ಕೋಟ್, ಅಮೃತಸರ ಸೇರಿದಂತೆ ಹಲವೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉಭಯದೇಶಗಳ ನಡುವೆ ಕದನ ವಿರಾಮ ಘೋಷಣೆ ಬಳಿಕ ಶಾಂತಿ ನೆಲೆಸುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಜಮ್ಮು-ಕಾಶ್ಮೀರದ ರಜೌರಿ, ಪೂಂಚ್, ಅನಂತ್ ನಾಗ್ ಜಿಲ್ಲೆಗಳಲ್ಲಿಯೂ ಯಾವುದೇ ಕದನ ವಿರಾಮದ ವರದಿಯಾಗಿಲ್ಲ. ಶಾಂತಿ ನೆಲೆಸಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read