ಚಲಿಸುತ್ತಿದ್ದ ಆಂಬುಲೆನ್ಸ್ ನಲ್ಲಿ ಮದ್ಯ ಸೇವಿಸಿದ ಪೊಲೀಸರು….! ವಿಡಿಯೋ ವೈರಲ್

ಪೊಲೀಸರು ಅಂದ್ರೆ ಶಿಸ್ತಿನ ಸಿಪಾಯಿಗಳು, ಕಾನೂನು ಪರಿಪಾಲಕರು ಎಂದೇ ಭಾವಿಸಲಾಗಿದೆ. ಆದರೆ ಆಂಬುಲೆನ್ಸ್ ನೊಳಗೇ ಪೊಲೀಸರು ಮದ್ಯ ಸೇವಿಸಿರೋ ಘಟನೆ ಪಂಜಾಬ್ ನಲ್ಲಿ ನಡೆದಿದೆ.‌

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪೊಲೀಸರ ನಡೆ ಬಗ್ಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೋಶಿಯಾರ್‌ಪುರದ ಕೇಂದ್ರ ಕಾರಾಗೃಹದ ಆಂಬುಲೆನ್ಸ್ ನೊಳಗೆ ಸಮವಸ್ತ್ರದಲ್ಲಿರುವ ಪೊಲೀಸರು ಮದ್ಯ ಸೇವಿಸಿದ್ದಾರೆ.

ವರದಿಗಳ ಪ್ರಕಾರ ಆಂಬುಲೆನ್ಸ್ ಚಲಿಸುತ್ತಿದ್ದಾಗ ಇಬ್ಬರು ಪೊಲೀಸರು ಖೈದಿಯೊಂದಿಗೆ ಮದ್ಯಪಾನ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಇದೇ ರೀತಿಯ ಘಟನೆ ಒಡಿಶಾದಲ್ಲಿ ನಡೆದಿತ್ತು. ಅಲ್ಲಿ ಆಂಬುಲೆನ್ಸ್ ಚಾಲಕನೊಬ್ಬ ರೋಗಿಯೊಂದಿಗೆ ಮದ್ಯ ಸೇವಿಸಿದ್ದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read