ಪಂಜಾಬಿನ ಮೊಹಾಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಹಾಡಹಗಲೇ ಕತ್ತಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶನಿವಾರ ಈ ಘಟನೆ ನಡೆದಿದ್ದು, ಹತ್ಯೆಯಾದ ಯುವತಿಯನ್ನು ಬಲ್ಜಿಂದರ್ ಕೌರ್ ಎಂದು ಗುರುತಿಸಲಾಗಿದೆ. ಈಕೆ ತನ್ನ ಇತರೆ ನಾಲ್ವರು ಗೆಳತಿಯರ ಜೊತೆ ಕೆಲಸಕ್ಕೆ ತೆರಳುತ್ತಿದ್ದಾಗ ಮುಸುಕು ಹಾಕಿಕೊಂಡು ಮರದ ಹಿಂದೆ ಬಚ್ಚಿಟ್ಟುಕೊಂಡಿದ್ದ ಆರೋಪಿ ಏಕಾಏಕಿ ಕತ್ತಿಯಿಂದ ಹಲ್ಲೆ ಮಾಡಲು ಆರಂಭಿಸಿದ್ದಾನೆ.
ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದು, ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ನರಳುತ್ತಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ.
ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದು ಪ್ರಕರಣ ನಡೆದ ಕೆಲವು ಗಂಟೆಗಳ ಒಳಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಾವ ಕಾರಣಕ್ಕಾಗಿ ಆತ ಈ ಕೃತ್ಯ ನಡೆಸಿದ್ದಾನೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
Shocking: CCTV footage from Mohali, shows a person murdering a girl with a sword in the morning. According to the initial investigation, the boy was pressuring the girl to marry him, but when she refused, he took this drastic step. They have known each other for the last 3-4… pic.twitter.com/k0OJZZGWlu
— Gagandeep Singh (@Gagan4344) June 8, 2024