HomeCrimeಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಪಂಜಾಬ್ ನ ಗುರುದ್ವಾರದ ಆವರಣದಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಟಿಯಾಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ಪ್ರಕಾರ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಪರ್ಮಿಂದರ್ ಕೌರ್ ಎಂಬ ಮಹಿಳೆ ದುಖ್ನಿವಾರ್ನ್ ಸಾಹಿಬ್ ಗುರುದ್ವಾರದ ಪವಿತ್ರ ನೀರಿನ ಟ್ಯಾಂಕ್ ಬಳಿ ಮದ್ಯ ಸೇವಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಬನ್ ಎಸ್ಟೇಟ್ ಹಂತ I ನಿವಾಸಿಯಾಗಿರುವ 32 ವರ್ಷದ ಮಹಿಳೆ ಪರ್ಮಿಂದರ್ ಕೌರ್ ಮೇಲೆ ಗುರುದ್ವಾರಕ್ಕೆ ನಿತ್ಯ ಭೇಟಿ ನೀಡುವ ನಿರ್ಮಲ್‌ಜಿತ್ ಸಿಂಗ್ ಸೈನಿ ಎಂಬಾತ ಹಲವು ಬಾರಿ ಗುಂಡು ಹಾರಿಸಿದ್ದಾನೆ.

“ಪರ್ಮಿಂದರ್ ಕೌರ್ ಗುರುದ್ವಾರ ದುಖನಿವಾರ್ನ್ ಸಾಹಿಬ್‌ನ ಸರೋವರದ ಬಳಿ ಮದ್ಯ ಸೇವಿಸುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ಅವಳನ್ನು ಮ್ಯಾನೇಜರ್ ಕಚೇರಿಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅಲ್ಲಿದ್ದ ನಿರ್ಮಲ್ ಜೀತ್ ಸಿಂಗ್ ಸೈನಿ ಎಂಬಾತ ಕೋಪದ ಭರದಲ್ಲಿ ಆಕೆಗೆ ಗುಂಡು ಹಾರಿಸಿದ್ದಾನೆ ಎಂದು ಎಸ್ ಪಿ ವರುಣ್ ಶರ್ಮಾ ಹೇಳಿದ್ದಾರೆ.

ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು, ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಆಸ್ತಿ ಡೀಲರ್ ಆಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular