ಚಂಡಿಗಢ: ಡಿವೈಡರ್ ಗೆ ಫಾರ್ಚೂನರ್ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳಾ ಕಾನ್ಸ್ ಟೇಬಲ್ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಪಂಜಾಬ್ ನ ಬಟಿಂಡಾ ಜಿಲ್ಲೆಯ ಗುಥರಿ ಬಳಿ ಭಾರತ್ ಮಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ದಟ್ಟವಾದ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಫಾರ್ಚೂನರ್ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಗುಜರಾತ್ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಪೈಕಿ ಓರ್ವ ಮಹಿಳಾ ಕಾನ್ಸ್ ಟೇಬಲ್ ಕೂಡ ಇದ್ದಾರೆ.
ಎಲ್ಲರೂ ಪಂಜಾಬ್ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಟಿಂಡಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

