ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಕ್ಷುಲ್ಲಕ ಕಾರಣಕ್ಕೂ ಸೇಡು ತೀರಿಸಿಕೊಳ್ಳುವುದು, ಅವಮಾನ ಎಂದು ಸಾವಿಗೆ ಶರಣಗುವಂತಹ ಸ್ಥಿತಿಗೆ ತಲುಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ವಿದ್ಯಾರ್ಥಿ, ವಿದ್ಯಾರ್ಥಿನಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದು, ಬಳಿಕ ತಾನೂ ಗುಂಡು ಹಾರಾಸಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.
ಪಂಜಾಬ್ ನ ತರಾನ್ ತರಾನ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕ್ಲಾಸ್ ರೂಂ ನಲ್ಲಿ ವಿದ್ಯಾರ್ಥಿಯೊಬ್ಬ ಪಕ್ಕದಲ್ಲಿದ್ದ ವಿದ್ಯಾರ್ಥಿನಿಯನ್ನು ಗುಂಡಿಟ್ಟು ಕೊಂದಿದ್ದಾನೆ. ಕ್ಷಣ ಮಾತ್ರದಲ್ಲಿಯೇ ತನ್ನ ತಲೆಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶೂಟೌಟ್ ನ ಭೀಕರ ದೃಶ್ಯ ಶಾಲೆಯ ಕೊಠಡಿಯಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕ್ಲಾಸ್ ರೂಮ್ ನಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕಣ್ಮುಂದೆಯೇ ನಡೆದ ಗುಂಡಿನ ದಾಳಿ, ಆತ್ಮಹತ್ಯೆ ಕಂಡು ವಿದ್ಯಾರ್ಥಿಗಳು, ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ.
ಯಾವ ಕಾರಣಕ್ಕಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯನ್ನು ಗುಂಡಿಟ್ಟು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಯಿಸಿ ತನಿಖೆ ನಡೆಸಿದ್ದಾರೆ.

