ಪಟಿಯಾಲಾ: ರೈಲ್ವೆ ಹಳಿ ಭೀಕರ ಸೊಹೋಟ ಸಂಭವಿಸಿದ್ದು, ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಪಟಿಯಾಲದ ಬಳಿ ನಡೆದಿದೆ.
ಪಟಿಯಾಲಾದ ಶಂಭು-ಅಂಬಾಲ ಮಾರ್ಗದ ರೈಲ್ವೆ ಹಳಿ ಬಳಿ ತಡರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ರೈಲ್ವೆ ಹಳಿ ಹಾನಿಯಾಗಿದೆ. ಘಟನಾ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ.
ಸ್ಫೋಟದ ನಂತರ, ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿಪಿ) ಮತ್ತು ಪಟಿಯಾಲ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಸರ್ಕಾರಿ ರೈಲ್ವೆ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ತಂಡಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ವಿಧಿವಿಜ್ಞಾನ ತಜ್ಞರ ತಂಡವೂ ಮಾದರಿಗಳನ್ನು ಸಂಗ್ರಹಿಸಿದ್ದಾರೆ.
ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ ಎಂದು ಪಟಿಯಾಲ ಎಸ್‌ಎಸ್‌ಪಿ ವರುಣ್ ಶರ್ಮಾ ಹೇಳಿದ್ದಾರೆ, ಹಳಿಗಳ ಬಳಿ ಪತ್ತೆಯಾದ ಶವದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆದರೆ ಶವವು ಛಿದ್ರಗೊಂಡ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಜನವರಿಯ ಆರಂಭದಲ್ಲಿ, ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್‌ನಲ್ಲಿರುವ ಸರಕು ಸಾಗಣೆ ಕಾರಿಡಾರ್ ಕೂಡ ಆಗಿರುವ ರೈಲ್ವೆ ಹಳಿಯಲ್ಲಿ ಸ್ಫೋಟ ಸಂಭವಿಸಿತ್ತು. ಗಣರಾಜ್ಯೋತ್ಸವಕ್ಕೆ ಕೇವಲ ಎರಡು ದಿನಗಳ ಮೊದಲು ನಡೆದಿದ್ದು, ಲೋಕೋ ಪೈಲಟ್ ಗಾಯಗೊಂಡಿದ್ದರು. ಇದೀಗ ರೈಲ್ವೆ ಹಳಿ ಬಳಿ ಮತ್ತೆ ಸ್ಫೋಟ ಸಂಭವಿಸಿದ್ದು, ಸಾಕಷ್ಟು ಅನುಮಾನ ವ್ಯಕ್ತವಾಗಿದೆ.

