HomeLatest NewsBREAKING NEWS: ಲಂಚ ಪಡೆಯುವಾಗ ಸಿಕ್ಕಿಬಿದ್ದು ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಸಾವು!

BREAKING NEWS: ಲಂಚ ಪಡೆಯುವಾಗ ಸಿಕ್ಕಿಬಿದ್ದು ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಸಾವು!

ಚಿತ್ರದುರ್ಗ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಸೇರಿದ್ದ ಪುರಸಭೆ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಮೃತರು. ಏ.20ರಂದು ಲಂಚ ಪಡೆಯುತ್ತಿದಾಗ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಸೇರಿದ್ದರು. ಜೈಲಿನಲ್ಲಿ ತೀವ್ರ ಎದೆನೋವು ಕಾಣಿಸಿಕೊಂದ ಹಿನ್ನೆಲೆಯಲ್ಲಿ ತಿಮ್ಮರಾಜು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಇ-ಖಾತೆ ಮಾಡಿಕೊಡಲು 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ತಿಮ್ಮರಾಜು, ಪುರಸಭೆ ಸದಸ್ಯ ಎನ್.ಶಾಂತಪ್ಪ ಬಳಿ 25 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ್ದರು.ಈಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular