HomeKarnatakaBREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದವರು. ಒಳಚರಂಡಿ ಕಾಮಗಾರಿಗೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭಟ್ಕಳ ಕಚೇರಿಯಲ್ಲಿಯೇ ನೀಲಕಂಠ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಕಾರವಾರ ಲೋಕಾಯುಕ್ತ ಎಸ್ ಪಿ ಕುಮಾರ್ ಚಂದ್ರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ನೀಲಕಂಠನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular