HomeLatest Newsಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಚಿತ್ರದುರ್ಗ:   2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಫೆ.24ರಂದು ಹೊಸದುರ್ಗ ತಾಲ್ಲೂಕಿನ ವಿವಿಧ ಖರೀದಿ ಕೇಂದ್ರಗಳಲ್ಲಿ ಚಾಲನೆ ದೊರೆಯಲಿದೆ.

ಹೊಸದುರ್ಗ ಶಾಸಕರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಅವರು ಖರೀದಿ ಪ್ರಕ್ರಿಯೆಯನ್ನು ಉದ್ಘಾಟಿಸುವರು. ಅಂದು ಬೆಳಿಗ್ಗೆ 10ಕ್ಕೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ಮಧ್ಯಾಹ್ನ 12ಕ್ಕೆ ಶ್ರೀರಾಂಪುರದ ದುರ್ಗದ ಸಿರಿಧಾನ್ಯ ರೈತ ಉತ್ಪಾದಕರ ಕಂಪನಿಯಲ್ಲಿ “ಸಾವೆ” ಖರೀದಿ ಕೇಂದ್ರ ಉದ್ಘಾಟಿಸಲಾಗುವುದು. ನಂತರ ಮಧ್ಯಾಹ್ನ 1.30ಕ್ಕೆ ಹೊಸದುರ್ಗದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ಆಹಾರ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಿ: ಡಾ. ತಿಪ್ಪೇಸ್ವಾಮಿ.ಕೆ.ಟಿ

ಉಗ್ರಾಣದ ಪ್ರತಿಯೊಂದು ಚೀಲದಲ್ಲಿರುವ ಧಾನ್ಯವೂ ಮಗುವಿನ ಆರೋಗ್ಯ, ಶಿಕ್ಷಣ ಮತ್ತು ಭವಿಷ್ಯಕ್ಕೆ ನೇರವಾಗಿ ಸಂಬಂಧಿಸಿದೆ. ಆಹಾರ ಸುರಕ್ಷತೆಯಲ್ಲಿ ಯಾವುದೇ ಅಸಡ್ಡೆ ತೋರದೆ ಅಧಿಕಾರಿಗಳು ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.

ನಗರದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ಡಾ.ಕೆ.ಟಿ.ತಿಪ್ಪೇಸ್ವಾಮಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆ ಮತ್ತು ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರವನ್ನು ಸೂಕ್ಷ್ಮ ವಿಭಾಗ ಎಂದು ಪರಿಗಣಿಸಬೇಕು. ಮಕ್ಕಳ ಆಹಾರದ ಗುಣಮಟ್ಟದ ರಾಜಿ ಅಥವಾ ನಿರ್ಲಕ್ಷ್ಯ ಸಲ್ಲದು. ಉಗ್ರಾಣಗಳ ಸ್ವಚ್ಛತೆ, ಧಾನ್ಯ ಸಂಗ್ರಹಣೆ, ಕೀಟ-ಇಲಿ ನಿಯಂತ್ರಣ ಮತ್ತು ಮೊದಲು ಬಂದ ಧಾನ್ಯವನ್ನು ಮೊದಲು ವಿತರಿಸುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಗಳು ಹಾಗೂ ಆಹಾರ ಸುರಕ್ಷತಾ ಕಾಯ್ದೆ-2006 ರ ನಿಯಮಗಳನ್ನು ಪ್ರತಿಯೊಂದು ಹಂತದಲ್ಲೂ ಪಾಲಿಸಬೇಕು. ಹಾನಿಯಾದ ಅಥವಾ ತೇವಾಂಶದಿAದ ಕೂಡಿದ ಆಹಾರ ಪದಾರ್ಥಗಳು ಕಂಡುಬAದಲ್ಲಿ ಕೂಡಲೇ ಅವುಗಳನ್ನು ಪ್ರತ್ಯೇಕಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಸಂಗ್ರಹಣೆ ಅಥವಾ ವಿತರಣೆಯಲ್ಲಿನ ಲೋಪವು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಮಾನ ಎಂದು ಅವರು ಎಚ್ಚರಿಸಿದರು. ಜಿಲ್ಲೆಯ ಎಲ್ಲಾ ಉಗ್ರಾಣಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಉಗ್ರಾಣ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular