HomeAgricultureBREAKING: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

BREAKING: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular