HomeKarnatakaBIG NEWS: ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಕ್ರಮ ಮದ್ಯ ಮಾರಾಟ; ಬೆಳಗಾವಿ ಅಬಕಾರಿ ಇಲಾಖೆ ಬಲೆಗೆ...

BIG NEWS: ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಕ್ರಮ ಮದ್ಯ ಮಾರಾಟ; ಬೆಳಗಾವಿ ಅಬಕಾರಿ ಇಲಾಖೆ ಬಲೆಗೆ ಬಿದ್ದ ಹೈಟೆಕ್ ಜಾಲ

ಬೆಳಗಾವಿ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂಧಿಸುವಲ್ಲಿ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬಳಿ ಬಂದ ಲಾರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೇ ಶಾಕ್ ಆಗುವ ರೀತಿಯಲ್ಲಿ ಮದ್ಯವನ್ನು ಸಾಗಿಸುತ್ತಿರುವುದು ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿಯಲ್ಲಿ ಟ್ರಾನ್ಸ್ ಫಾರ್ಮರ್ ಥರ ಬಿಂಬಿತವಾಗುವಂತೆ ಬಾಕ್ಸ್ ಗಳನ್ನು ಇರಿಸಿದ್ದು, ಬಾಕ್ಸ್ ಮಧ್ಯದಲ್ಲಿ ವಿವಿಧರೀತಿಯ ಗೋವಾ ಮದ್ಯಗಳನ್ನು ಇಟ್ಟು ಸಾಗಿಸುತ್ತಿದ್ದರು. ದಾಳಿ ವೇಳೆ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ಹಾಗೂ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular