HomeKarnatakaBREAKING: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಗೆ 4 ವರ್ಷ ಜೈಲು, 40 ಸಾವಿರ...

BREAKING: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ

ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಲ್ಲಿಹಾಳ ನಾಡಕಚೇರಿ ಕಚೇರಿ ಉಪ ತಹಶೀಲ್ದಾರ್ ಪುಷ್ಪಲತಾ ಶಿಕ್ಷೆಗೊಳಗಾದವರು. ಅವರಿಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ ವಿಧಿಸಲಾಗಿದೆ.

ಹುಟ್ಟು ಮೂಕನಾಗಿರುವ ವ್ಯಕ್ತಿಗೆ ಅಂಗವಿಕಲರ ವೇತನ ಕೊಡಿಸಲು ರೂ.10,000 ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ರೂ.5,000 ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿ ತಾಲೂಕಿನ ಕಲ್ಲಿಹಾಳ್‌ ನಾಡಕಚೇರಿಯ ಉಪ ತಹಶೀಲ್ದಾರ್‌ ಪುಷ್ಪಲತಾ ಅವರಿಗೆ ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 4 ವರ್ಷಗಳ ಸಜ ಮತ್ತು ₹40,000 ದಂಡ ವಿಧಿಸಿ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್‌ ಎಂಬುವರು ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಪಡೆಯಲು ಕಲ್ಲಿಹಾಳ್‌ ನಾಡಕಚೇರಿಗೆ ತೆರಳಿದ್ದಾಗ, ಉಪ ತಹಶೀಲ್ದಾರ್‌ ಪುಷ್ಪಲತಾ ಅವರು ರೂ.10,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಗಿರೀಶ್‌ ಅವರು ನೀಡಿದ ದೂರಿನನ್ವಯ 2017 ರ ಸೆಪ್ಟೆಂಬರ್ 21 ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್‌ ಅವರಿಂದ ರೂ.5,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 2026 ರ ಸೆಪ್ಟೆಂಬರ್ 1 ರಂದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್‌ ರಾಜ್‌ ಅವರು ವಾದ ಮಂಡಿಸಿದ್ದರು. 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular