ಜೀ ಕನ್ನಡದ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿ ‘ಪುಟ್ಟಕ್ಕನ ಮಕ್ಕಳು’ ದಿನೇ ದಿನೇ ತನ್ನ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಎಲ್ಲರ ಮನೆ ಮಾತಾಗಿದೆ. ಈ ಧಾರಾವಾಹಿ ಇದೀಗ 800 ಸಂಚಿಕೆಗಳನ್ನು ಪೂರೈಸಿದ್ದು, ಈ ಸಂತಸವನ್ನು ಜೀ ಕನ್ನಡ ವಾಹಿನಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದೆ.
ಆರೂರು ಜಗದೀಶ್ ಹಾಗೂ ಮಹೇಶ್ ಸಾರಂಗ್ ನಿರ್ದೇಶಿಸಿರುವ ಈ ಧಾರಾವಾಹಿಯಲ್ಲಿ ಸ್ಯಾಂಡಲ್ವುಡ್ನ ಹಿರಿಯ ನಟಿ ಉಮಾಶ್ರೀ ಪುಟ್ಟಕ್ಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ಷರ, ಸಂಜನಾ ಬುರ್ಲಿ, ಶಿಲ್ಪ, ಧನುಷ್ ಎನ್ ಎಸ್, ಮಂಜು ಭಾಷಿಣಿ, ರಮೇಶ್ ಪಂಡಿತ್, ಸಾರಿಕಾ, ಬಿಗ್ ಬಾಸ್ ಖ್ಯಾತಿಯ ಹಂಸ ಅಭಿನಯಿಸಿದ್ದಾರೆ.
ಪುಟ್ಟಕ್ಕನ ಮಕ್ಕಳು ಧಾರಾವಾಹಿ ಆರಂಭದಿಂದಲೂ ಒಳ್ಳೆಯ ರೇಟಿಂಗ್ ನಲ್ಲಿದ್ದು, ಒಂದರ ಮೇಲೊಂದು ತಿರುವುಗಳಿಂದ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ.