HomeKarnatakaವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ

ವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಕೈತಪ್ಪಿದ್ದರಿಂದ ವಿಧಾನಸಭೆ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಳ್ಳಲು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ನಿರ್ಧರಿಸಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನೊಂದು ವರ್ಷದ ನಂತರ ಸಚಿವ ಸ್ಥಾನದ ಭರವಸೆ ನೀಡಲಾಗಿದೆ. ಅಲ್ಲಿವರೆಗೆ ಉಪ ಸಭಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಲ್ಲಿ ಸಚಿವ ಸ್ಥಾನ ಸಿಗದ ಕಾರಣ ಬೇಸರ ಇದ್ದುದು ನಿಜ. ಪಕ್ಷದ ವರಿಷ್ಠ ತೀರ್ಮಾನಕ್ಕೆ ತಲೆಬಾಗಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸಲು ಒಪ್ಪಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular