HomeKarnatakaಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೈತಪ್ಪಿದೆ. ನಾನು ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ. ಬೆಂಬಲಿಗರು ಮತ್ತು ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಜೊತೆಗೆ ಸಂಪರ್ಕ ಕಡಿತವಾಗುಲಿದ್ದು, ಮತದಾರರ ಬಳಿ ಹೋಗಲು ಸಾಧ್ಯವಾಗುವುದಿಲ್ಲ. ನನಗೆ ಈ ಹುದ್ದೆ ಬೇಡವೆಂದು ಮುಖ್ಯಮಂತ್ರಿಗಳಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊದಲು ನನಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಇದಕ್ಕೆ ಕಾರಣವೇನೆಂದು ಗೊತ್ತಿಲ್ಲ. ನನಗೆ ಉಪಸಭಾಧ್ಯಕ್ಷ ಸ್ಥಾನ ಬೇಡ, ನಾನು ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular