HomeKarnatakaBIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ

BIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ಕೊಡುವುದು ಬಿಡುವುದು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಉಪ ಸಭಾಪತಿ ಸ್ಥಾನ ಕೊಟ್ಟಿದ್ದರು. ಆದರೆ, ನಾನೇ ಬೇಡವೆಂದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಹೈಕಮಾಂಡ್ ಗೆ ಗೊತ್ತು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಕಾರ್ಯಕ್ರಮಗಳಲ್ಲಿ ಒಟ್ಟಾಗಿಯೇ ಇಬ್ಬರು ಭಾಗವಹಿಸುತ್ತಿದ್ದಾರೆ. ಭಿನ್ನಾಭಿಪ್ರಾಯ ಎಂಬುದು ವಿರೋಧ ಪಕ್ಷಗಳ ಆರೋಪವಷ್ಟೇ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular