HomeKarnatakaಭಕ್ತರಿಗೆ ಮುಖ್ಯ ಮಾಹಿತಿ: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಭಕ್ತರಿಗೆ ಮುಖ್ಯ ಮಾಹಿತಿ: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕ ಅಳವಡಿಸಲಾಗಿದೆ.

ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ, ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ.

ದೇವಸ್ಥಾನಕ್ಕೆ ಬರುವಾಗ ಭಕ್ತರು ಧರಿಸಬಹುದಾದ ವಸ್ತ್ರಗಳ ಮಾದರಿಯನ್ನು ಚಿತ್ರದ ಮೂಲಕ ಸೂಚನಾ ಫಲಕದಲ್ಲಿ ಹಾಕಲಾಗಿದೆ. ಅನೇಕ ವರ್ಷಗಳಿಂದ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ವಸ್ತ್ರ ಸಂಹಿತೆ ಜಾರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚನಾ ಫಲಕ ಅಳವಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular