HomeKarnatakaBREAKING: PWD ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಲೋಕಾಯುಕ್ತ ಬಲೆಗೆ

BREAKING: PWD ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಲೋಕಾಯುಕ್ತ ಬಲೆಗೆ

ಚಾಮರಾಜನಗರ: ಲೋಕೋಪಯೋಗಿ ಇಲಾಖೆ ಗುಣ ಭರವಸೆ ವಿಭಾಗದ ಲ್ಯಾಬ್ ಟೆಕ್ನಿಷಿಯನ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲ್ಯಾಬ್ ಟೆಕ್ನಿಷಿಯನ್ ನಂದರಾಜು 4,500 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಂದರಾಜು ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆಯಲಾಗಿದೆ.

ಎಂ ಸ್ಯಾಂಡ್ ಗುಣಮಟ್ಟ ಪರೀಕ್ಷಾ ವರದಿ ನೀಡಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕ್ರಷರ್ ಮಾಲಿಕ ಪ್ರಸನ್ನ ಕುಮಾರನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಲ್ಯಾಬ್ ಟೆಕ್ನಿಷಿಯನ್ ನಂದರಾಜು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular