HomeEntertainmentಪ್ರೀತಿ ಮತ್ತು ಬಾಂಧವ್ಯದ ಕಥಾಹಂದರ: ಯೂಟ್ಯೂಬ್‌ನಲ್ಲಿ ಸೌಂಡ್ ಮಾಡುತ್ತಿದೆ 'ಪ್ಯಾರ್' ಟೀಸರ್!

ಪ್ರೀತಿ ಮತ್ತು ಬಾಂಧವ್ಯದ ಕಥಾಹಂದರ: ಯೂಟ್ಯೂಬ್‌ನಲ್ಲಿ ಸೌಂಡ್ ಮಾಡುತ್ತಿದೆ ‘ಪ್ಯಾರ್’ ಟೀಸರ್!

ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿ ಸ್ಟಾರ್ ವಿ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಪ್ಯಾರ್’ ಸಿನಿಮಾದ ಬಹುನಿರೀಕ್ಷಿತ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಪ್ರೀತಿ, ಪ್ರೇಮ ಹಾಗೂ ತಂದೆ-ಮಗಳ ನಡುವಿನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಟೀಸರ್ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಈ ಚಿತ್ರವನ್ನು ಎಸ್ ಸುಪ್ರೀತ್ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಎಸ್ ಎಮ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹೆಚ್ ಎಸ್ ನಾಗಶ್ರೀ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿಚಂದ್ರನ್ ಅವರೊಂದಿಗೆ ರಿಶ್ವಿನ್, ರಾಶಿಕಾ ಶೆಟ್ಟಿ, ಅಚ್ಯುತ್ ಕುಮಾರ್, ವಿಜಯ್ ಸೂರ್ಯ, ಶ್ರೀನಿವಾಸ್ ಮೂರ್ತಿ, ಶೋಭರಾಜ್, ಶಂಕರ್ ಅಶ್ವಥ್ ಸೇರಿದಂತೆ ದೊಡ್ಡ ತಾರಾಗಣವೇ ಅಭಿನಯಿಸಿದೆ.

ಚಿತ್ರಕ್ಕೆ ಪಳನಿ ಡಿ ಸೇನಾಪತಿ ಸಂಗೀತ ಹಾಗೂ ಹಿನ್ನೆಲೆ ಸಂಗೀತ ಒದಗಿಸಿದ್ದು, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ ನಿರ್ವಹಿಸಿದ್ದಾರೆ. ರಾಹುಲ್ ಮತ್ತು ವಿ ನಾಗೇಶ್ ನೃತ್ಯ ನಿರ್ದೇಶನ ಮಾಡಿದ್ದರೆ, ಟೈಗರ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಎಚ್‌ಎಸ್ ನಾಗಶ್ರೀ ನಿರ್ಮಾಣದ ಈ ಸಿನಿಮಾ ಸದ್ಯ ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದ್ದು, ರವಿಚಂದ್ರನ್ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular