HomeKarnatakaಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ನಿಂದ 6 ಟಿಕೆಟ್ ಖರೀದಿಗೆ ಅವಕಾಶ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ನಿಂದ 6 ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸುವಂತೆ ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನವೆಂಬರ್ 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೇಟ್ ಖರೀದಿಸುವ ವ್ಯವಸ್ಥೆ ಪರಿಚಯಿಸಲಾಗುತ್ತಿದೆ.

ನಮ್ಮ ಮೆಟ್ರೋ ಆ್ಯಪ್, ವಾಟ್ಸಾಪ್, ಪೇಟಿಎಂ, ಯಾತ್ರಾ ಆ್ಯಪ್ ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಸ್ತುತ ಒಂದು ಟಿಕೆಟ್ ಖರೀದಿಗೆ ಮಾತ್ರ ಅವಕಾಶವಿದ್ದು, ನವೆಂಬರ್ 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಮಾಡಲಾಗಿದೆ. ಪ್ರಯಾಣಿಕರು ಪ್ರವೇಶ ಮತ್ತು ನಿರ್ಗಮನದ ಸಂದರ್ಭದಲ್ಲಿ ಎಫ್.ಸಿ. ಗೇಟ್ ಬಳಿ ಆರು ಜನ ಪ್ರಯಾಣಿಕರಿಗೆ ಒಂದೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಇದರಿಂದಾಗಿ ಟಿಕೆಟ್ ಕೌಂಟರ್ ನಲ್ಲಿ ಸರತಿ ಸಾಲು ನಿಯಂತ್ರಿಸಲು ಸಾಧ್ಯವಾಗುತ್ತದೆ. ಕ್ಯೂಆರ್ ಕೋಡ್ ಟಿಕೆಟ್ ಮೇಲೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular