HomeKarnatakaಮತದಾರರಿಗೆ ಗುಡ್ ನ್ಯೂಸ್: ದೇಶದಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್

ಮತದಾರರಿಗೆ ಗುಡ್ ನ್ಯೂಸ್: ದೇಶದಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ಇದೇ ಮೊದಲ ಬಾರಿಗೆ ಹೊಸ ಪ್ರಯೋಗ ಕೈಗೊಂಡಿದೆ. ಮತದಾರರಿಗೆ ಕ್ಯೂಆರ್ ಕೋಡ್ ಹೊಂದಿರುವ ವೋಟರ್ ಸ್ಲಿಪ್ ನೀಡಲಾಗುವುದು.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್ ಸ್ಲಿಪ್ ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್  ಮುದ್ರಿಸಲಾಗಿದೆ.

ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೌಲಭ್ಯಗಳು ಕಲ್ಪಿಸಲಾಗುವುದು. ನಗರದ ನಿವಾಸಿಗಳು ಕ್ಯೂಆರ್ ಕೋಡ್ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತದಾನದ ಕೇಂದ್ರ, ದಿನಾಂಕ, ಸಮಯ ಮೊದಲಾದ ಮಾಹಿತಿಯನ್ನು ಇದು ಒಳಗೊಂಡಿರುತ್ತದೆ. ಆದರೆ, ಇದರಲ್ಲಿ ಮತದಾರರ ಫೋಟೋ ಇರುವುದಿಲ್ಲ. ಮತದಾರರ ಮಾಹಿತಿ ಚೀಟಿಯನ್ನು ಮತದಾರರ ಗುರುತಿನ ಪುರಾವೆಯಾಗಿ ಪರಿಗಣಿಸುವುದಿಲ್ಲ. ಕೇಂದ್ರ ಚುನಾವಣಾ ಆಯೋಗ ವತಿಯಿಂದ ನಿಗದಿಪಡಿಸಲಾದ ಮತದಾರರ ಗುರುತಿನ ಚೀಟಿ ಅಥವಾ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿರುವ ಯಾವುದೇ ಇತರೆ ಗುರುತಿನ ಚೀಟಿಗಳನ್ನು ಗುರುತಿನ ಪುರಾವೆಯಾಗಿ ಬಳಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular