BREAKING: KSET ಮೂಲ ದಾಖಲಾತಿ ಪರಿಶೀಲನೆಗೆ ಕೊನೆ ಅವಕಾಶ: ವಿವಾಹಿತೆಯರು ಪತಿ ಹೆಸರಿನೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಬೆಂಗಳೂರು: KSET-2023 ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗದವರು ನ.12ರಂದು ಬೆಳಿಗ್ಗೆ 10ಗಂಟೆಗೆ KEA ಕಚೇರಿಗೆ ಬರುವುದು. ಒಟ್ಟು 228 ಮಂದಿ ಇನ್ನೂ ದಾಖಲೆ ಪರಿಶೀಲನೆಗೆ ಬಂದಿಲ್ಲ. ಇದು ಕೊನೆ ಅವಕಾಶವಾಗಿದ್ದು, ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಲಾಗಿದೆ.

ದಿನಾಂಕ 11.07.2024 ರಿಂದ 22.07.2024 ರವರೆಗೆ ಮತ್ತು 31.07.2024, 17.08.2024 ಹಾಗೂ 13.09.2024 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗಿತ್ತು. ಆದರೆ, ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ, ದಾಖಲಾತಿ ಪರಿಶೀಲನೆ ಆಪೂರ್ಣಗೊಂಡ ಅಭ್ಯರ್ಥಿಗಳು ಮತ್ತೊಮ್ಮೆ ಮೂಲ ದಾಖಲೆಗಳ ಪರಿಶೀಲನೆಗೆ ಕಾಲಾವಾಶ ನೀಡುವಂತೆ ಪ್ರಾಧಿಕಾರಕ್ಕೆ ಕೋರಿರುತ್ತಾರೆ.

ದಾಖಲಾತಿ ಪರಿಶೀಲನೆಗೆ ಅರ್ಹರಿದ್ದು ಇದುವರೆಗೂ ದಾಖಲಾತಿ ಪರೀಶೀಲನೆ ಪೂರ್ಣಗೊಳ್ಳದೆ ಇರುವವರು ದಾಖಲಾತಿ ಪರಿಶೀಲನೆಗೆ ತಪ್ಪದೆ ಹಾಜರಾಗುವಂತೆ ತಿಳಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ದಾಖಲಾತಿ ಪರಿಶೀಲನೆಗೆ ಯಾವುದೇ ಅವಕಾಶ ನೀಡಲಾಗುವುದಿಲ್ಲ ಹಾಗೂ ದಾಖಲಾತಿ ಪರಿಶೀಲನೆಗೆ ಹಾಜರಾಗದೆ ಇರುವ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯಿಂದ ಕೈಬಿಡಲಾಗುವುದು.

ವಿವಾಹಿತ ಮಹಿಳಾ ಅಭ್ಯರ್ಥಿಗಳು(ಕೆಸೆಟ್-2023ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 20. 3ಎ, 3ಬಿ ಮೀಸಲಾತಿ ಕೋರಿರುವ ಮಹಿಳಾ ಅಭ್ಯರ್ಥಿಗಳು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.

ಈಗಾಗಲೇ ದಾಖಲಾತಿ ಪರಿಶೀಲನೆ ಪೂರ್ಣಗೊಂಡು ಕೆಸೆಟ್ ಪ್ರಮಾಣ ಪತ್ರವನ್ನು ಇದುವರೆಗೂ ಪಡೆಯದಿರುವ(ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವು ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದು ಖುದ್ದು ಹಾಜರಾಗಿ ದಾಖಲೆ ಪರಿಶೀಲನೆ ಸಮಯದಲ್ಲಿ ನೀಡಲಾದ ವೆರಿಫಿಕೇಷನ್ ಕ್ಲಿಪ್ ಅನ್ನು ಪ್ರಾಧಿಕಾರಕ್ಕೆ ಸಲ್ಲಿಸಿ ಕೆಸೆಟ್ ಪ್ರಮಾಣ ಪತ್ರವನ್ನು ಪಡೆಯಲು ಸೂಚಿಸಿದೆ.

Helpline: 080-23 460 460.

e-mail: keauthority-ka@nic.in

Website: http://kea.kar.nic.in

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read