ದೇಶದ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ.

ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ ಜಯಗಳಿಸಿದರೆ ಗುಣಮಟ್ಟದ ಮದ್ಯ ಸರಬರಾಜು ಮಾಡಲಾಗುವುದು. ಜನರ ಅಪೇಕ್ಷೆಯಂತೆ ಮದ್ಯದ ದರ ಕಡಿಮೆ ಮಾಡಲಾಗುವುದು ಎಂದು ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು ಭರವಸೆ ನೀಡಿದ್ದಾರೆ.

ಕುಪ್ಪಂ ಲೋಕಸಭಾ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ತೆಲುಗು ದೇಶಂ ಪಕ್ಷ ಅಧಿಕಾರಕ್ಕೆ ಬಂದ 40 ದಿನಗಳಲ್ಲಿ ಯುವ ಜನರ ಬಯಕೆಯಂತೆ ಎಲ್ಲಾ ಮದ್ಯದ ದರ ಇಳಿಕೆ ಮಾಡಲಾಗುವುದು. ಗುಣಮಟ್ಟದ ಮದ್ಯ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read