HomeLatest Newsಶಾಲೆಯ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ…!

ಶಾಲೆಯ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ…!

ಬೆಂಗಳೂರು: ಇತ್ತೀಚೆಗೆ ನಡೆದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

10 ಹೆಚ್ಚು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಲಾಗಿದೆ. ತುಮಕೂರು ಜಿಲ್ಲೆಯ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ.ಡಿ. ಗಿರೀಶ್, ಕಲಬುರಗಿ ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ ಮತ್ತು ಶಿಕ್ಷಕಿಯರಾದ ಫರ್ಜಾನಾ ಬೇಗಂ,  ಫಾಹ್ಮಿದಾ, ರಾಮನಗರದ ಶಿಕ್ಷಕ ಅಮ್ಜದ್ ಖಾನ್ ಬಂಧಿತರಾಗಿದ್ದಾರೆ.

ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಜಾಲತಾಣದಲ್ಲಿ ಸೋರಿಕೆಯಾಗಿತ್ತು. ಶಾಲಾ ಪರೀಕ್ಷಾ ಮಂಡಳಿ ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಶಾಲೆಯ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು, ಮುಖ್ಯ ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಸಂಗತಿ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷೆಗೆ ಮೂರು ಗಂಟೆಗೆ ಮೊದಲು ವಿದ್ಯಾರ್ಥಿಗಳಿಗೆ ಪತ್ರಿಕೆ ವಿತರಿಸಿದ್ದಾರೆ. ಆದರೆ ವಿದ್ಯಾರ್ಥಿಗಳು ಅದನ್ನು ಹಣಕ್ಕೆ ಮಾರಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular