HomeLatest NewsBIG NEWS : ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಧಿಡೀರ್ ತಪಾಸಣೆ : ಮೊಬೈಲ್, ನಿಷೇಧಿತ ವಸ್ತು...

BIG NEWS : ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಧಿಡೀರ್ ತಪಾಸಣೆ : ಮೊಬೈಲ್, ನಿಷೇಧಿತ ವಸ್ತು ಜಪ್ತಿ.!

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ.

ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ಅವರ ನಿರ್ದೇಶನದ ಮೇರೆಗೆ ‘ಕಾರಾಗೃಹ ಸುಧಾರಣಾ ಸಂಕಲ್ಪ’ ಅಭಿಯಾನದಡಿ ಡಿ.17ರ ರಾತ್ರಿ 9ರಿಂದ 10.30ರವರೆಗೆ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಜೈಲರ್, ಸಹಾಯಕ ಜೈಲರ್ ಹಾಗೂ ಸಿಬ್ಬಂದಿ ಒಳಗೊಂಡ ತಂಡವು ಕಾರಾಗೃಹದ ಒಳ ಆವರಣದಲ್ಲಿ ಆವರಣದಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳಾದ 4 ಕೀ-ಪ್ಯಾಡ್ ಮೊಬೈಲ್, 1 ಚಾರ್ಜರ್, 3 ಯುಎಸ್ಬಿ ಕನೆಕ್ಟರ್ ಕೇಬಲ್, 1 ಇಯರ್ ಫೋನ್ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾರಿಯ ಬೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (ಸಂಖ್ಯೆ: 231/2025) ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬ್ಬಂದಿಗೆ ಬಹುಮಾನ: ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆ ರೂ.10,000 ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular