ಪಾಪರ್ ಆಗಿ ಖಾಲಿ ಖಜಾನೆಯಲ್ಲಿನ ಚಿಲ್ಲರೆಯನ್ನು ಎಣಿಸುತ್ತಿರುವ ಸಿಎಂ ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರಿಗೆ ಬಿಡುಗಡೆಯಾಗಿರುವ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಬ್ಯಾಂಕ್ ಗಳಿಗೆ ಸೂಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರೈತರ ಹಣ ಸಾಲಕ್ಕೆ ಜಮೆ ಮಾಡದಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಕ್ಷಣ ಸೂಚಿಸಲಿ ಎಂದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ 3454 ಕೋಟಿ ಬರ ಪರಿಹರದ ಹಣ ಬಿಡುಗಡೆ ಮಾಡಿದೆ. ಆದರೆ ಇದಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರದ ಹಣವನ್ನು ಕೂಡ ರೈತರಿಗೆ ಸರಿಯಾಗಿ ಕೊಡುತ್ತಿಲ್ಲ. ಪರಿಹಾರದ ಹಣವನ್ನು ರೈತರ ಹಳೆ ಬಾಕಿಗಳಿಗೆ ಬ್ಯಾಂಕ್ ಗಳು ಜಮೆ ಮಾಡುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ತಕ್ಷಣ ಕ್ರಮ ವಹಿಸದೇ ಕೈಕಟ್ಟಿ ಕುಳಿತಿದೆ. ಪಿಂಚಣಿ, ನರೇಗಾ, ಪರಿಹಾರ ಹಣ ರೈತರ ಕೈ ಸೇರುವಂತೆ ನೋಡಿಕೊಳ್ಳುವಲ್ಲಿ ಸರ್ಕಾರ ವಿಫಲಾಗಿದೆ ಎಂದು ಕಿಡಿಕಾರಿದರು.

ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ಎಣಿಸುತ್ತಿದ್ದಾರೆ. ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read