HomeLatest NewsBIG NEWS: ಸಿಎಂ ಸಿದ್ದರಾಮಯ್ಯ ಈಗ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್: ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿ...

BIG NEWS: ಸಿಎಂ ಸಿದ್ದರಾಮಯ್ಯ ಈಗ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್: ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿ ನೀಡಿ ಸನ್ಮಾನಿಸಿದರೂ ಅಚ್ಚರಿಯಿಲ್ಲ: ಆರ್.ಅಶೋಕ್ ಲೇವಡಿ

ಬೆಂಗಳೂರು: “ಪಾಕಿಸ್ತಾನ ರತ್ನ” ಸಿಎಂ ಸಿದ್ದರಾಮಯ್ಯನವರೇ ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular