HomeUncategorizedಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೆ ಶಾಸಕ ಭರತ್ ರೆಡ್ಡಿಯೇ ಕಾರಣ: ಗೂಂಡಾ ಕಾಯ್ದೆಯಡಿ ಅವರನ್ನು ಬಂಧಿಸಬೇಕು:...

ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೆ ಶಾಸಕ ಭರತ್ ರೆಡ್ಡಿಯೇ ಕಾರಣ: ಗೂಂಡಾ ಕಾಯ್ದೆಯಡಿ ಅವರನ್ನು ಬಂಧಿಸಬೇಕು: ಆರ್.ಅಶೋಕ್ ಆಗ್ರಹ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಘರ್ಷಣೆ ಗಲಾಟೆ ವೇಳೆ ನಡೆದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಶಾಸಕ ಭರತ್ ರೆಡ್ದಿಯೇ ಈ ಘಟನೆಗೆ ಕಾರಣ. ತಮ್ಮದೇ ಪಕ್ಷದ ಕಾರ್ಯಕರ್ತನ ಸಾವಿಗೆ ಅವರು ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ್, ಬಳ್ಳಾರಿಯಲ್ಲಿ ನಡೆದ ಘಟನಾವಳಿ ಹಾಗೂ ರಾಜಶೇಖರ್ ಸಾವಿಗೆ ಭರತ್ ರೆಡ್ಡಿಯೇ ನೇರ ಕಾರಣ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ಜನಾರ್ಧನ ರೆಡ್ಡಿ ಅವರ ಮನೆಗೆ ನುಗ್ಗಿ ಕಾಂಗ್ರೆಸ್ ನವರು ಬ್ಯಾನರ್ ಗಳನ್ನು ಕಟ್ಟಲು ಯತ್ನಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದಾರೆ. ಇವರನ್ನು ಮೊದಲು ಗೂಂಡಾ ಕಾಯ್ದೆಯಡಿ ಬಂದಿಸಬೇಕು. ಜನಾರ್ಧನ ರೆಡ್ಡಿ ಅವರನ್ನು ಮುಗಿಸಲು ಕಾಂಗ್ರೆಸ್ ನವರು ತೀರ್ಮಾನಿಸಿಸಿದಂತಿದೆ. ಶಾಸಕ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸುದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನ ಗೂಂಡಾಗಳು ಜನಾರ್ಧನ ರೆಡ್ಡಿ, ಶ್ರೀರಾಮುಲು ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಅಲ್ಲದೇ ಬಳ್ಳಾರಿ ಗಲಾಟೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular