HomeKarnatakaಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿರುವ 'ಸಮ್ಮಿಶ್ರ ಸರ್ಕಾರ' ಪತನ : ಆರ್.ಅಶೋಕ್ ಭವಿಷ್ಯ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿರುವ ‘ಸಮ್ಮಿಶ್ರ ಸರ್ಕಾರ’ ಪತನ : ಆರ್.ಅಶೋಕ್ ಭವಿಷ್ಯ

ಚಿಕ್ಕಮಗಳೂರು : ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಸಮ್ಮಿಶ್ರ ಸರ್ಕಾರವಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಈ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ್ ಕಾಂಗ್ರೆಸ್ ಜನರನ್ನು ವಂಚಿಸಿ ಅಧಿಕಾರಕ್ಕೆ ಬಂದಿದೆ. ಈ ಸರ್ಕಾರ ಬಹಳ ದಿನ ಇರಲ್ಲ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಜನರಿಗೆ ಮಾಡಿದ ವಂಚನೆ ಬಗ್ಗೆ ತಿಳಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಳ್ಳಿಗಳಿಗೆ ಮತ್ತು ನಗರಕ್ಕೆ ಹೋಗೋಣ ಎಂದು ಕರೆ ನೀಡಿದರು.

ರಾಜ್ಯದಲ್ಲಿರುವುದು ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಸಮ್ಮಿಶ್ರ ಸರ್ಕಾರ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯ ಸರ್ಕಾರ ಪತನ ಗ್ಯಾರಂಟಿ ಎಂದು ಹೇಳಿದರು. ಗ್ಯಾರಂಟಿಕಾರ್ಡ್ ಹಿಡಿದು ಮನೆಬಾಗಿಲಿಗೆ ತೆರಳಿ ಜನರನ್ನು ಕಾಂಗ್ರೆಸ್ ಪಕ್ಷ ಮರುಳು ಮಾಡಿದೆ. ರಾಜ್ಯದ ಜನರಿಗೆ 5 ಕೆ.ಜಿ.ಅಕ್ಕಿಕೊಡುತ್ತಿರುವುದು ಕೇಂದ್ರಸರ್ಕಾರ ಎಂಬುದು ಗೊತ್ತಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular