HomeKarnatakaBIG NEWS: ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಕೆ: ನವೆಂಬರ್ 4ರಿಂದ ಬಿಜೆಪಿ ಹೋರಾಟ...

BIG NEWS: ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಕೆ: ನವೆಂಬರ್ 4ರಿಂದ ಬಿಜೆಪಿ ಹೋರಾಟ ಆರಂಭ: ಆರ್.ಅಶೋಕ್

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರ ಕಬಳಿಸುತ್ತಿದ್ದು, ಇದರ ವಿರುದ್ಧ ನವೆಂಬರ್ 4 ರಿಂದ ಬಿಜೆಪಿ ಹೋರಾಟ ಆರಂಭಿಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ ಎಂದರು.

ರಾಜ್ಯ ಸರ್ಕಾರವೇ ಅಧಿಕೃತವಾಗಿ ಒತ್ತುವರಿ ಆರಂಭ ಮಾಡಿದೆ. ಇದರ ವಿರುದ್ಧ ರೈತ ಸಂಘಟನೆಗಳು ತೀವ್ರವಾಗಿ ಪ್ರತಿಭಟಿಸಬೇಕು. ಹಿಂದೆ ಮುಸ್ಲಿಂ ರಾಜರು ದಾಳಿ ಮಾಡಿ, ಮತಾಂಧತೆ ಮೆರೆದಿದ್ದರು. ಟಿಪ್ಪು ಸುಲ್ತಾನ ಕೊಡಗಿನಲ್ಲಿ ಮತಾಂತರ ಮಾಡಿರುವುದು ಇದಕ್ಕೆ ಸಾಕ್ಷಿ. ಇದೇ ರೀತಿ ಈಗ ಜಮೀನಿನ ಕಬಳಿಕೆ ನಡೆಯುತ್ತಿದೆ. ಇಂತಹವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸರ್ಕಾರ ತುಘಲಕ್ ಆಡಳಿತ ನೀಡಿ ನಗೆಪಾಟಲಿಗೀಡಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿದೆ. ಡಿ.ಕೆ‌.ಶಿವಕುಮಾರ್ ಅವರಿಗೆ ಮಹಿಳೆಯರು ಫೋನ್ ಕರೆ ಮಾಡಿ ಯೋಜನೆ ಬೇಡವೆಂದು ತಿಳಿಸಿದ್ದಾರಂತೆ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ, ಯೋಜನೆ ರದ್ದುಪಡಿಸಲು ಈ ರೀತಿ ಕಾರಣ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular