ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ್ರೋಹಿಗಳಿಗೆ ಹಬ್ಬ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ್ರೋಹಿಗಳಿಗೆ, ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಡಿದ ಆರ್.ಅಶೋಕ್, ಈ ಹಿಂದಿನ ಅವಧಿಯಲ್ಲಿ ಗಲಭೆಯಲ್ಲಿ ಭಾಗಿಯಾಗಿದ್ದ ಕೆಎಫ್‌ಡಿ, ಪಿಎಫ್ಐ ನಂತಹ ಮತಾಂಧರ ಪ್ರಕರಣಗಳನ್ನು ಕಾಂಗ್ರೆಸ್ ಹಿಂಪಡೆದಿತ್ತು. ಈಗ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಪ್ರಕರಣ ಹಿಂಪಡೆಯುವ ಮೂಲಕ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಕಾಂಗ್ರೆಸ್ ಸರ್ಕಾರ ಕುಗ್ಗಿಸಿದೆ ಎಂದು ಕಿಡಿಕಾರಿದರು. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಪ್ರಕರಣ ಹೋರಾಟದ ಪ್ರಕರಣ ಆಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ. ಎಸ್ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read